Saturday, November 19, 2011

ಅಧ್ಯಾಪಕರ ನಿಯೋಜನೆ ರದ್ದು

ಬೆಂಗಳೂರು: ರಾಜ್ಯದ ಪದವಿಪೂರ್ವ ಕಾಲೇಜು ಉಪನ್ಯಾಸಕರು, ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರನ್ನು ಬೋಧಕೇತರ ಕೆಲಸಗಳಿಗೆ ನಿಯೋಜನೆ ಮಾಡುವುದನ್ನು ನಿಷೇಧಿಸಿ ಸರ್ಕಾರ ಆದೇಶ ಹೊರಡಿಸಿದೆ.

ಮಾತೃ ಇಲಾಖೆಯಿಂದ ಬೇರೆ ಇಲಾಖೆಗಳಿಗೆ ನಿಯೋಜನೆ ಮೇಲೆ ತೆರಳುವುದರಿಂದ ಬೋಧನಾ ಕಾರ್ಯಕ್ಕೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಶಿಕ್ಷಕರು, ಉಪನ್ಯಾಸಕರು ನಿಯೋಜನೆ ಮೂಲಕ ಶಾಸಕರು, ಸಚಿವರ ಆಪ್ತ ಕಾರ್ಯದರ್ಶಿ, ವಿಶೇಷಾಧಿಕಾರಿಗಳಾಗಿ ತೆರಳುವುದರಿಂದ ಶಾಲಾ- ಕಾಲೇಜುಗಳಲ್ಲಿ ಸಿಬ್ಬಂದಿ ಕೊರತೆ ಉಂಟಾಗುತ್ತಿದೆ. ಆದ್ದರಿಂದ 2006ರಲ್ಲಿ ಹೈಕೋರ್ಟ್ ನೀಡಿರುವ ತೀರ್ಪು ಆಧರಿಸಿ ನಿಯೋಜನೆಯನ್ನು ನಿಷೇಧಿಸಲಾಗಿದೆ ಎಂದು ಇದೇ 8ರಂದು ಹೊರಡಿಸಿರುವ ಆದೇಶದಲ್ಲಿ ತಿಳಿಸಲಾಗಿದೆ.

See Today's Prajavani

http://www.prajavani.net/web/include/story.php?news=50872&section=2&menuid=10

No comments:

Post a Comment