ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಮುಕ್ತ ಹಾಗೂ ಪಾರದರ್ಶಕವಾಗಿ ನಡೆಸಲು ಪದವಿ ಪೂರ್ವ ಶಿಕ್ಷಣ ಇಲಾಖೆ ಎಲ್ಲ ರೀತಿಯ ಕ್ರಮಕೈಗೊಂಡಿದ್ದು, ವಿದ್ಯಾರ್ಥಿಗಳು, ಪೋಷಕರು ವದಂ
24 ಮಂದಿ ಡಿಬಾರ್ ರಾಜ್ಯದಲ್ಲಿ ಬುಧವಾರ ನಡೆದ ದ್ವಿತೀಯ ಪಿಯುಸಿ ಕನ್ನಡ, ತಮಿಳು, ಮಲಯಾಳಂ ಮತ್ತು ಅರೇಬಿಕ್ ವಿಷಯಗಳ ಪರೀಕ್ಷೆಯಲ್ಲಿ ನಕಲು ಮಾಡುತ್ತಿದ್ದ 24 ವಿದ್ಯಾರ್ಥಿಗಳನ್ನು ಡಿಬಾರ್ ಮಾಡಲಾಗಿದೆ. |
ತಿಗಳಿಗೆ ಕಿವಿಗೊಡಬಾರದು ಎಂದು ಇಲಾಖೆಯ ಆಯುಕ್ತೆ ವಿ.ರಶ್ಮಿ ಮನವಿ ಮಾಡಿದ್ದಾರೆ.
ಪ್ರಶ್ನೆಪತ್ರಿಕೆ ಬಹಿರಂಗವಾಗಿದೆ ಎಂದು ಕೆಲವರು ವದಂತಿ ಹಬ್ಬಿಸುತ್ತಿದ್ದಾರೆ. ಎಸ್‌ಎಂಎಸ್ ಸಂದೇಶಗಳು ರವಾನೆಯಾಗುತ್ತಿವೆ. ಇದು ಸತ್ಯಕ್ಕೆ ದೂರವಾಗಿದ್ದು, ಆತಂಕಪಡುವ ಅಗತ್ಯವಿಲ್ಲ.
ಪ್ರಶ್ನೆಪತ್ರಿಕೆ ಬಹಿರಂಗವಾಗದಂತೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದೆ. ಕೆಲವರು ಹಣಕ್ಕಾಗಿ ಮೋಸ ಮಾಡುವ ಕಾರ್ಯದಲ್ಲಿ ತೊಡಗಿದ್ದಾರೆ. ಆ ರೀತಿ ಯಾರಾದರೂ ಪ್ರಶ್ನೆಪತ್ರಿಕೆ ನೀಡುತ್ತೇವೆ ಎಂದು ಮುಂದೆ ಬಂದರೆ ಇಲಾಖೆಯ ಗಮನಕ್ಕೆ ತರಬೇಕು ಎಂದು ಕೋರಿದ್ದಾರೆ.
ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸಹಾಯವಾಣಿ ಆರಂಭಿಸಲಾಗಿದೆ. ಪರೀಕ್ಷೆಗೆ ಸಿದ್ಧರಾಗುವ ವಿಧಾನ, ಓದುವ ಕೌಶಲ, ಸಮಯ ನಿರ್ವಹಣೆ, ಜ್ಞಾಪಕಶಕ್ತಿ ವೃದ್ಧಿ, ಒತ್ತಡ ನಿವಾರಣೆ, ಮುಂದಿನ ವ್ಯಾಸಂಗದ ಕುರಿತ ಮಾಹಿತಿ ಇತ್ಯಾದಿಗಳನ್ನು ತಿಳಿದುಕೊಳ್ಳಬಹುದಾಗಿದೆ.
ಸಹಾಯವಾಣಿ ಸಂಖ್ಯೆ: 080-23468740/23468741. ಬೆಳಿಗ್ಗೆ 8.30ರಿಂದ ಸಂಜೆ 7ರವರೆಗೆ ಸಹಾಯವಾಣಿಗೆ ಕರೆ ಮಾಡಬಹುದಾಗಿದೆ.
ವದಂತಿಗಳಿಗೆ ಕಿವಿಗೊಡಬೇಡಿ: ಆಯುಕ್ತೆ ರಶ್ಮಿ -ಪ್ರಜಾವಾಣಿ ವರದಿ
No comments:
Post a Comment